ಬೆಂಗಳೂರು: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದ ಮುಂಚೂಣಿಯ ರಾಜ್ಯವನ್ನಾಗಿ ರೂಪಿಸುವ ಉದ್ದೇಶದಿಂದ, ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ನಗರದ **ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIEC)ದಲ್ಲಿ ನಡೆದ ಗೂಗಲ್ ಐ/ಒ ಕನೆಕ್ಟ್ ಇಂಡಿಯಾ–2026ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಐ ತಂತ್ರಜ್ಞಾನವನ್ನು ಆಡಳಿತ, ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಸಾರ್ವಜನಿಕ ಸೇವೆಗಳೊಂದಿಗೆ ಸಮಗ್ರವಾಗಿ ಜೋಡಿಸುವ ಮಹತ್ವಾಕಾಂಕ್ಷೆಯ ಯೋಜನೆ ರೂಪಿಸಿದೆ ಎಂದು ತಿಳಿಸಿದರು.



