Close Menu
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಉಡುಪಿ: ಅ.23ರಂದು ‘ಊರೂರು ಜಂತರ್ ಮಂತರ್’ ದೇಶವ್ಯಾಪಿ ಪ್ರತಿಭಟನೆ
    ಸುದ್ದಿ

    ಉಡುಪಿ: ಅ.23ರಂದು ‘ಊರೂರು ಜಂತರ್ ಮಂತರ್’ ದೇಶವ್ಯಾಪಿ ಪ್ರತಿಭಟನೆ

    navabharathaBy navabharathaOctober 21, 2026

    ಉಡುಪಿ: ಸಂವಿಧಾನಿಕ ಪ್ರಜಾಪ್ರಭುತ್ವದ ರಕ್ಷಣೆ, ಮತದಾನದ ಹಕ್ಕಿನ ಸಂರಕ್ಷಣೆ ಹಾಗೂ ಅಕ್ರಮವೆಂದು ಆರೋಪಿಸಲಾದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ 23ರಂದು ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
    ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು, ನಾಗರಿಕ ವೇದಿಕೆಗಳು ಹಾಗೂ ರಾಜಕೀಯ ಪಕ್ಷಗಳು ಒಗ್ಗೂಡಿ ‘ಊರೂರು ಜಂತರ್ ಮಂತರ್’ ಘೋಷವಾಕ್ಯದಡಿ ಪ್ರತಿಭಟನೆಗೆ ಕರೆ ನೀಡಿವೆ ಎಂದು ಚಿಂತಕ ಪ್ರೊ. ಫಣಿರಾಜ್ ತಿಳಿಸಿದರು.
    ಉಡುಪಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ವಿರುದ್ಧವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುವ ಮೂಲಕ ಕೋಟ್ಯಂತರ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    2023ರಲ್ಲಿ ಜಾರಿಗೆ ತಂದಿರುವ ಚುನಾವಣಾ ಆಯುಕ್ತರ ನೇಮಕಾತಿ ನಿಯಮಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ. ಅವುಗಳನ್ನು ರದ್ದುಗೊಳಿಸಿ, ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ನಿಷ್ಪಕ್ಷಪಾತವನ್ನು ಖಾತರಿಪಡಿಸುವ ಹೊಸ ನಿಯಮ ರೂಪಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಾಗಿವೆ ಎಂದು ತಿಳಿಸಿದರು.
    ಪ್ರಜಾಪ್ರಭುತ್ವದ ಮಾರ್ಗದಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು ದಮನಿಸುವ ಉದ್ದೇಶದಿಂದ ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ಸಭೆ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಆರೋಪಿಸಿದ ಅವರು, ಈ ಕ್ರಮವನ್ನು ವಿರೋಧಿಸಿ ದೇಶದ ಪ್ರತಿಯೊಂದು ಊರಿನಲ್ಲೂ ಪ್ರತಿಭಟನೆ ನಡೆಸುವ ಉದ್ದೇಶದಿಂದ ‘ಪ್ರತಿ ಊರು ಜಂತರ್ ಮಂತರ್’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
    ಅಕ್ಟೋಬರ್ 23ರಂದು ಮಧ್ಯಾಹ್ನ 3.30ಕ್ಕೆ ಉಡುಪಿಯ ಕ್ಲಾಕ್ ಟವರ್ ಬಳಿಯ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸುವ ಮೂಲಕ ಪ್ರತಿಭಟನೆ ಆರಂಭವಾಗಲಿದೆ. ಬಳಿಕ ತ್ರಿವೇಣಿ ವೃತ್ತ, ಕೆ.ಎಂ. ಮಾರ್ಗ, ಹಳೆ ಡಯಾನ ವೃತ್ತ ಹಾಗೂ ಕೋರ್ಟ್ ರಸ್ತೆ ಮೂಲಕ ಕಾಲ್ನಡಿಗೆ ಮೆರವಣಿಗೆ ಸಾಗಲಿದೆ. ಜೋಡುಕಟ್ಟೆ ಎದುರು ಪ್ರತಿಭಟನಾ ಸಭೆ ನಡೆಯಲಿದೆ ಎಂದರು.

    Previous Articleಸರ್ಕಾರಿ ನೌಕರರಿಗೆ ಸತತ ನಾಲ್ಕು ದಿನ ರಜೆ ಭಾಗ್ಯ; ಅ.23ರಂದು ವಿಶೇಷ ರಜೆ ಘೋಷಣೆ!
    Next Articleಉಡುಪಿ:  ಕೃಷ್ಣ ಮಠದಲ್ಲಿ ವಿಜಯದಶಮಿ ಸಂಭ್ರಮ: ತೆನೆಪೂಜೆ  ಚಿನ್ನದ ಪಲ್ಲಕ್ಕಿಯಲ್ಲಿ ಭತ್ತದ ತೆನೆಯ ಮೆರವಣಿಗೆ; ಕೃಷ್ಣನಿಗೆ ಸಮರ್ಪಣೆಉಡುಪಿ: ಕೃಷ್ಣ ಮಠದಲ್ಲಿ ವಿಜಯದಶಮಿ ಸಂಭ್ರಮ: ತೆನೆಪೂಜೆ ಚಿನ್ನದ ಪಲ್ಲಕ್ಕಿಯಲ್ಲಿ ಭತ್ತದ ತೆನೆಯ ಮೆರವಣಿಗೆ; ಕೃಷ್ಣನಿಗೆ ಸಮರ್ಪಣೆ

    Related Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    ತಾಜಾ ಸುದ್ದಿಗಳು

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.