ಕುಂಬಳೆ: ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕುಂಬಳೆಯ ಮೀನು ಮಾರುಕಟ್ಟೆ ಕಟ್ಟಡದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು ಸರಿಪಡಿಸುವಂತೆ ಜನಪ್ರತಿನಿಧಿಗಳು ಒತ್ತಾಯಿಸಿದ್ದಾರೆ.
ಮೀನು ಮಾರಾಟಗಾರರು ಹಾಗೂ ಮಾರುಕಟ್ಟೆಗೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ಲಭ್ಯವಾಗದಿರುವುದು ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಇಷ್ಟು ದೊಡ್ಡ ಮೊತ್ತದ ವೆಚ್ಚದಲ್ಲಿ ನಿರ್ಮಿಸಲಾದ ಮಾರುಕಟ್ಟೆಯಲ್ಲಿ ಮೂಲಸೌಕರ್ಯಗಳಿಲ್ಲದಿರುವುದು ಸಮಸ್ಯೆ ಕಾರಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮಾರುಕಟ್ಟೆಯಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.


