ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಭವಾನಿಶಂಕರ್ ಎನ್. ಅವರನ್ನು ಮೂಡಬಿದಿರೆಗೆ ವರ್ಗಾವಣೆ ಮಾಡಲಾಗಿದೆ.
ಶ್ರೀಯುತರು ಈ ಹಿಂದೆ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸಿದ್ದು, ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಸ್ವಚ್ಛತಾ ನಿರ್ವಹಣೆಯಲ್ಲಿ ಅನುಭವ ಹೊಂದಿದ್ದಾರೆ. ತಮ್ಮ ಕಾರ್ಯಾವಧಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಮಲತ್ಯಾಜ್ಯ ನಿರ್ವಹಣೆ ಹಾಗೂ ಘನತ್ಯಾಜ್ಯ ವಿಲೇವಾರಿಗೆ ಆದ್ಯತೆ ನೀಡಿದ್ದರು. ಪ್ರತಿಯೊಂದು ಮನೆಗೂ ಶೌಚಾಲಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿಯೂ ಕಾರ್ಯನಿರ್ವಹಿಸಿದ್ದರು.
ತಮ್ಮ ಕಾರ್ಯದಕ್ಷತೆ ಹಾಗೂ ಆಡಳಿತಾತ್ಮಕ ಅನುಭವದಿಂದ ಜಿಲ್ಲೆಯ ವಿವಿಧೆಡೆ ಜನರ ಮೆಚ್ಚುಗೆ ಗಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವುದು, ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಹಾಗೂ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾರ್ಯಗಳಲ್ಲಿ ಇವರ ಅನುಭವ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಸಹಕಾರಿಯಾಗುವ ನಿರೀಕ್ಷೆಯಿದೆ.



