Close Menu
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ
    ಸುದ್ದಿ

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    navabharathaBy navabharathaNovember 1, 2026

    ಕಾಸರಗೋಡು: ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಿ, ಮುಂದಿನ ಬಜೆಟ್‌ನಲ್ಲಿ ಘೋಷಿಸುವಂತೆ ಕೇರಳ ಸರಕಾರಕ್ಕೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮನವಿ ಮಾಡಿದೆ.
    ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕಾಸರಗೋಡು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕೇರಳ ರಾಜ್ಯ ಘಟಕದ ಸಹಯೋಗದಲ್ಲಿ ನ.1ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಮನವಿ ಮಾಡಲಾಯಿತು.
    ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ನಗರಸಭಾ ಕೌನ್ಸಿಲರ್ ಶಾರದಾ ಬಿ. ಕನ್ನಡ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು.
    ಈ ಸಂದರ್ಭದಲ್ಲಿ ಮಾತನಾಡಿದ ದಾಸ ಸಂಕೀರ್ತನಕಾರ ಹಾಗೂ ಹರಿದಾಸ ಜಯಾನಂದ ಕುಮಾರ ಕಾಸರಗೋಡು, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕನ್ನಡಪರ ಸಂಘ-ಸಂಸ್ಥೆಗಳ ಸದಸ್ಯರು ಸ್ವಯಂಪ್ರೇರಿತರಾಗಿ ಕನ್ನಡ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಕರೆ ನೀಡಿದರು.
    ಕಳೆದ 36 ವರ್ಷಗಳಿಂದ ಪ್ರತಿವರ್ಷ ನವೆಂಬರ್ 1ರಂದು ನಿರಂತರವಾಗಿ ಕನ್ನಡ ರಾಜ್ಯೋತ್ಸವ ಮತ್ತು ಜಿಲ್ಲಾ ಕನ್ನಡ ದಿನಾಚರಣೆ ಆಚರಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಂಘಟಕ ಹಾಗೂ ಗಾಯಕ ಪಿ. ದಿವಾಕರ ಕಾಸರಗೋಡು ಅವರು ಕನ್ನಡ ಪ್ರತಿಜ್ಞೆ ಬೋಧಿಸಿದರು. ಕೆ.ಎನ್. ವೆಂಕಟರಮಣ ಹೊಳ್ಳ ಮತ್ತು ಬಿ. ಸತೀಶ್ ಕೂಡ್ಲು ಶುಭ ಹಾರೈಸಿದರು.
    ಕಾಸರಗೋಡಿನಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಕಾರ್ಯಪ್ರವೃತ್ತವಾಗಬೇಕು ಎಂಬ ಬೇಡಿಕೆಯನ್ನೂ ಪ್ರತಿಷ್ಠಾನ ಮುಂದಿಟ್ಟಿದೆ.
    ನ.28ರಿಂದ ಕೇರಳ ರಾಜ್ಯ ಕನ್ನಡ ಸಮ್ಮೇಳನ
    ಕಾಸರಗೋಡು ಕನ್ನಡ ಗ್ರಾಮದಲ್ಲಿ ನವೆಂಬರ್ 28 ಮತ್ತು 29ರಂದು ಕೇರಳ ರಾಜ್ಯದ 8ನೇ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕೇರಳ-ಕರ್ನಾಟಕ ಭವನಕ್ಕೆ ಶಿಲಾನ್ಯಾಸ ನೆರವೇರಿಸಲು ಉದ್ದೇಶಿಸಲಾಗಿದೆ.
    ಸಮ್ಮೇಳನದಲ್ಲಿ ಕೇರಳ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಕನ್ನಡ ಸಂಘ-ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳಿಂದ ಸುಮಾರು ಒಂದು ಸಾವಿರ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಕೇರಳ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳು, ಸಚಿವರು, ಕಾಸರಗೋಡು ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಶಿವರಾಮ ಕಾಸರಗೋಡು ತಿಳಿಸಿದ್ದಾರೆ.
    ಕುಶಲ ಕುಮಾರ ಕೆ. ಕನ್ನಡ ಗ್ರಾಮ ಕಾರ್ಯಕ್ರಮ ಸಂಯೋಜಿಸಿದರು.

    Previous Articleಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
    Next Articleಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    Related Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    ತಾಜಾ ಸುದ್ದಿಗಳು

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.