ಕಲಬುರಗಿ, ಅ.31: ಕಲಬುರಗಿ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ 2023ನೇ ಬ್ಯಾಚ್ನ ಐಎಎಸ್ ಅಧಿಕಾರಿ ಪಿ. ಶ್ರವಣಕುಮಾರ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಆಯುಕ್ತರಾಗಿದ್ದ ಅವಿನಾಶ್ ಸಿಂಧೆ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಪಿ. ಶ್ರವಣಕುಮಾರ್ ಅವರನ್ನು ನೂತನ ಆಯುಕ್ತರನ್ನಾಗಿ ನೇಮಕ ಮಾಡಲಾಗಿದ್ದು, ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.



