ಮಂಗಳೂರು: ಮಂಗಳೂರು ನಗರ ಉತ್ತರ ಮಂಡಲದ ಭಾರತೀಯ ಜನತಾ ಪಾರ್ಟಿ ವತಿಯಿಂದ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಅಭಿಯಾನದ ಅಂಗವಾಗಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಜನರ ಆಶೋತ್ತರಗಳಿಗೆ ಸ್ಪಂದಿಸಬೇಕಾದ ಸರ್ಕಾರ ಜನರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ. ಜನರ ಹಕ್ಕುಗಳನ್ನು ರಕ್ಷಿಸುವ ಬದಲು ಅವರ ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸುವ ಆಡಳಿತ ನೀತಿಗಳನ್ನು ಅನುಸರಿಸುತ್ತಿದೆ ಎಂದು ಟೀಕಿಸಿದರು.
ಜನರ ಧ್ವನಿಯಾಗಿ, ಅವರ ಹಕ್ಕುಗಳ ರಕ್ಷಣೆಗಾಗಿ ಬಿಜೆಪಿ ಸದಾ ಹೋರಾಟದ ಮುಂಚೂಣಿಯಲ್ಲಿರಲಿದೆ. ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.



