ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ವತಿಯಿಂದ ಮೂರು ಕೆರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿದ ಹಿನ್ನೆಲೆಯಲ್ಲಿ ಕ್ಷೇತ್ರದ ಮುಖಂಡ ದಿನೇಶ್ ಕುಂಪಲ ಸೇರಿದಂತೆ ಹಲವು ನಾಯಕರು ಮುಡಾ ಕಚೇರಿಗೆ ಭೇಟಿ ನೀಡಿದರು.
ಕುಂಪಲ ಮೂರುಕಟ್ಟೆ ಕೆರೆ, ಅಂಬ್ಲಮೊಗರು ವಾಡಕೆರೆ ಹಾಗೂ ಹರೇಕಳ ರಾಜಗುಡ್ಡೆ ತಾಮರೆ ಕೆರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿರುವ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಪ್ರಾಧಿಕಾರದ ಅಧಿಕಾರಿಗಳನ್ನು ಅಭಿನಂದಿಸಿದರು.



