ಮಂಗಳೂರು: ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಈಗಾಗಲೇ ಗುರುತಿಸಲಾಗಿರುವ ಸ್ಥಳಗಳಲ್ಲಿ ಡ್ರೋನ್ ಮೂಲಕ ಸರ್ವೆ ಕಾರ್ಯ ನಡೆಸಲಾಯಿತು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಸರ್ವೆ ಕಾರ್ಯದ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮುಡಾ ಆರ್.ಐ. ಜೋಯ್ ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ನಿಟ್ಟಿನಲ್ಲಿ ಸ್ಥಳಗಳ ಸಮೀಕ್ಷೆ ಹಾಗೂ ಅಗತ್ಯ ಮಾಹಿತಿಗಳ ಸಂಗ್ರಹ ಕಾರ್ಯ ಮಹತ್ವದ ಹೆಜ್ಜೆಯಾಗಿದೆ.



