ಮಂಗಳೂರು: ಕೌಶಲ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ಅತ್ಯುತ್ತಮ ಸರ್ಕಾರಿ ಅನುದಾನಿತ ಐಟಿಐ (ITI) ಸಂಸ್ಥೆಗಳ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೆಬಿಕ್ ತಾಂತ್ರಿಕ ತರಬೇತಿ ಸಂಸ್ಥೆಯು ಪ್ರತಿಷ್ಠಿತ ಕೌಶಲ್ಯ ಕರ್ನಾಟಕ ಪ್ರಶಸ್ತಿ – 2026ಕ್ಕೆ ಭಾಜನವಾಗಿದೆ. ಪ್ರಶಸ್ತಿಯೊಂದಿಗೆ ಸಂಸ್ಥೆಗೆ ₹50,000 ನಗದು ಬಹುಮಾನವೂ ಲಭಿಸಿದೆ.
ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕೌಶಲ್ಯ ಸಮ್ಮೇಳನ – 2026ರಲ್ಲಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸಂಸ್ಥೆಯ ಪರವಾಗಿ ಪ್ರಾಂಶುಪಾಲರಾದ ಶ್ರೀ ಚೇತನ್ ಆರ್. ಅವರು ಪ್ರಶಸ್ತಿ ಸ್ವೀಕರಿಸಿದರು. ಕೌಶಲ್ಯಾಭಿವೃದ್ಧಿ ಹಾಗೂ ತಾಂತ್ರಿಕ ತರಬೇತಿ ಕ್ಷೇತ್ರದಲ್ಲಿ ಸಂಸ್ಥೆ ನೀಡಿರುವ ವಿಶೇಷ ಕೊಡುಗೆಯನ್ನು ಗುರುತಿಸಿ ಈ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಲಾಗಿದೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀ ಪ್ರದೀಪ್ ಡಿಸೋಜಾ ಉಪಸ್ಥಿತರಿದ್ದರು.




