ಮಂಗಳೂರು: ಸಹಕಾರ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಪ್ರತಿಷ್ಠಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ.
ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಈ ಸಂಘವು ಸುಮಾರು 95 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ. ಸಹಕಾರಿ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಸಂಘವು ಎಸ್ಸಿಡಿಸಿಸಿ ಬ್ಯಾಂಕ್ನಿಂದ 2017-18ರಿಂದ 2025-26ರವರೆಗೆ ಸತತ ಒಂಬತ್ತು ವರ್ಷಗಳ ಕಾಲ ಸಾಧನಾ ಪ್ರಶಸ್ತಿಯನ್ನು ಪಡೆದುಕೊಂಡಿರುವುದು ವಿಶೇಷವಾಗಿದೆ.
ನವೆಂಬರ್ 1ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾಘವ ಆರ್. ಉಚ್ಚಿಲ್, ನಿರ್ದೇಶಕರಾದ ಚಂದ್ರಕಲಾ ಕೆ., ಕಿರಣ್ ಕುಮಾರ್ ಶೆಟ್ಟಿ, ನಿಶಿತಾ ಜಯರಾಮ್, ಪ್ರೇಮ್ ರಾಜ್ ಭಂಡಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.




