ನವದೆಹಲಿ: ಉತ್ತರ ಪ್ರದೇಶ ಸೇರಿದಂತೆ ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು 2027ರ ಜನವರಿ ಮೊದಲ ವಾರ ಅಥವಾ ಜನವರಿ ಮಧ್ಯಭಾಗದಲ್ಲಿ ಪ್ರಕಟಿಸುವ ಸಾಧ್ಯತೆಯಿದೆ.
ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾ ರಾಜ್ಯಗಳ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೊಸ ಸರ್ಕಾರಗಳ ರಚನೆಗಾಗಿ ಚುನಾವಣೆ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಿದ್ಧತೆಗಳನ್ನು ಚುರುಕುಗೊಳಿಸಿದೆ.
ನವೆಂಬರ್ ಅಂತ್ಯ ಅಥವಾ ಡಿಸೆಂಬರ್ನಲ್ಲಿ ಆಯೋಗದ ಭೇಟಿ
ಚುನಾವಣಾ ದಿನಾಂಕ ಪ್ರಕಟಿಸುವ ಮೊದಲು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇಬ್ಬರು ಚುನಾವಣಾ ಆಯುಕ್ತರನ್ನು ಒಳಗೊಂಡ ಪೂರ್ಣ ಪ್ರಮಾಣದ ಆಯೋಗವು ಐದೂ ರಾಜ್ಯಗಳಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು (DGP) ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಚುನಾವಣಾ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಲಿದೆ.
ಈಗಾಗಲೇ ಉಪ ಚುನಾವಣಾ ಆಯುಕ್ತರ ನೇತೃತ್ವದ ತಂಡಗಳು ಪಂಜಾಬ್, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಪ್ರಾಥಮಿಕ ಪರಿಶೀಲನೆ ಪೂರ್ಣಗೊಳಿಸಿವೆ. ಉತ್ತರ ಪ್ರದೇಶ ಮತ್ತು ಗೋವಾದಲ್ಲಿ ಪರಿಶೀಲನಾ ಪ್ರಕ್ರಿಯೆ ಬಾಕಿಯಿದ್ದು, ನವೆಂಬರ್ ಅಂತ್ಯದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ.
Previous Article
ಗೂಡುದೀಪ ಸ್ಪರ್ಧೆಯಲ್ಲಿ ಪೊಳಲಿಯ ಲಿಖಿತ್ಗೆ ಪ್ರೋತ್ಸಾಹಕ ಬಹುಮಾನ
ಗೂಡುದೀಪ ಸ್ಪರ್ಧೆಯಲ್ಲಿ ಪೊಳಲಿಯ ಲಿಖಿತ್ಗೆ ಪ್ರೋತ್ಸಾಹಕ ಬಹುಮಾನ

