ಮಂಗಳೂರು: ಕೇಕ್ ಹಾಗೂ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಹಾನಿಕಾರಕ ಬಣ್ಣಗಳ ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ವಿವಿಧ ಆಹಾರ ತಯಾರಿಕಾ ಮತ್ತು ಮಾರಾಟ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದ ತಂಡವು ಕ್ಲೌಡ್ ಕಿಚನ್ ಹಾಗೂ ಸೆಂಟ್ರಲ್ ಕೇಕ್ ಮ್ಯಾನುಫ್ಯಾಕ್ಚರಿಂಗ್ ಯೂನಿಟ್ಗಳಿಂದ ಕೇಕ್ ಮತ್ತು ಐಸ್ಕ್ರೀಮ್ಗಳನ್ನು ಪಡೆದು ಮಾರಾಟ ಮಾಡುತ್ತಿರುವ ರಿಬ್ಬನ್ಸ್ ಅಂಡ್ ಬಲೂನ್ಸ್ ಹಾಗೂ ಹೈವ್ ಫ್ರಾಂಚೈಸಿ ಘಟಕಗಳಲ್ಲಿ ಪರಿಶೀಲನೆ ನಡೆಸಿತು.
ವಿಶೇಷವಾಗಿ ಸುರತ್ಕಲ್ ವ್ಯಾಪ್ತಿಯಲ್ಲಿ ತೀವ್ರ ಪರಿಶೀಲನೆ ಕೈಗೊಂಡ ಅಧಿಕಾರಿಗಳು ಕೇಕ್ಗಳ ತಯಾರಿಕೆಯಲ್ಲಿ ಬಳಸಲಾಗುತ್ತಿರುವ ಬಣ್ಣಗಳ ಗುಣಮಟ್ಟ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸುವ ಉದ್ದೇಶದಿಂದ ಮಾದರಿಗಳನ್ನು ಸಂಗ್ರಹಿಸಿದರು.
ಕೇಕ್ಗಳು ಆಕರ್ಷಕವಾಗಿ ಕಾಣುವಂತೆ ಮಾಡಲು ಆರೋಗ್ಯಕ್ಕೆ ಹಾನಿಕಾರಕವಾದ ಬಣ್ಣಗಳನ್ನು ಬಳಸಬಾರದು ಎಂದು ಅಧಿಕಾರಿಗಳು ಘಟಕಗಳ ಮಾಲೀಕರು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಹಬ್ಬದ ಸಂದರ್ಭಗಳಲ್ಲಿ ತಯಾರಿಸುವ ಸಿಹಿ ತಿಂಡಿಗಳಲ್ಲಿಯೂ ಅನಗತ್ಯ ಬಣ್ಣಗಳ ಬಳಕೆಯನ್ನು ತಪ್ಪಿಸಿ, ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸುವುದರೊಂದಿಗೆ ಸ್ವಚ್ಛ ಮತ್ತು ಗುಣಮಟ್ಟದ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡುವಂತೆ ಸೂಚಿಸಲಾಯಿತು.
Previous Article
ಮಂಜೇಶ್ವರ ಬ್ಲಾಕ್ ಪಂಚಾಯತ್ನ PMAY ಯೋಜನೆಯಲ್ಲಿ ₹17 ಲಕ್ಷ ದುರುಪಯೋಗ ಆರೋಪ
ಮಂಜೇಶ್ವರ ಬ್ಲಾಕ್ ಪಂಚಾಯತ್ನ PMAY ಯೋಜನೆಯಲ್ಲಿ ₹17 ಲಕ್ಷ ದುರುಪಯೋಗ ಆರೋಪ

