ಮಂಗಳೂರು: ನಗರದ ಅತ್ತಾವರದಲ್ಲಿರುವ ಲಾಡ್ಜ್ವೊಂದರಲ್ಲಿ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಲಾಡ್ಜ್ನ ಕೊಠಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಿಟಕಿಯ ಮೂಲಕ ಬೆಂಕಿಯ ಜ್ವಾಲೆ ಹಾಗೂ ದಟ್ಟ ಹೊಗೆ ಹೊರಬರುತ್ತಿರುವುದು ಕಂಡುಬಂದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾಡ್ಜ್ನ ಇತರ ಕೊಠಡಿಗಳಲ್ಲಿದ್ದವರು ತಕ್ಷಣ ಕೆಳಗೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಲಾಡ್ಜ್ನಲ್ಲಿದ್ದವರಲ್ಲಿ ಆತಂಕ ಉಂಟಾಗಿತ್ತು.
ಬೆಂಕಿ ಅವಘಡಕ್ಕೆ ನಿಖರ ಕಾರಣ ಹಾಗೂ ಹಾನಿಯ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.



