ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ವೈಭವದ ಗೋಪೂಜೆಯನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನೆರವೇರಿಸಲಾಯಿತು.
ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಗೋವುಗಳನ್ನು ವಿವಿಧ ಬಗೆಯ ಹೂವುಗಳಿಂದ ಸುಂದರವಾಗಿ ಅಲಂಕರಿಸಿ, ವಿಶೇಷ ನೈವೇದ್ಯ ಸಮರ್ಪಿಸಿ ಪೂಜೆ ಸಲ್ಲಿಸಲಾಯಿತು.
ಬಳಿಕ ಅಲಂಕೃತ ಗೋವುಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀಮಠದ ದಿವಾನರು, ಪಾರುಪತ್ಯೆದಾರರು, ಸಿಬ್ಬಂದಿ ವರ್ಗ ಹಾಗೂ ಗೋಪಾಲಕರು ಉಪಸ್ಥಿತರಿದ್ದರು.



