ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ರಸ್ತೆಗೆ ಮಗುಚಿ ಬಿದ್ದು ಬೆಂಕಿ ಹೊತ್ತಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಏಕಮುಖ ರಸ್ತೆಯ ಮತ್ತೊಂದು ಪಥಕ್ಕೆ ಏಕಾಏಕಿ ಬಂದಿದ್ದರಿಂದ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಬಿದ್ದು ತಕ್ಷಣ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ತಕ್ಷಣ ವ್ಯವಸ್ಥೆ ಇಲ್ಲದ ಕಾರಣ ಬೈಕ್ ಭಾಗಶಃ ಸುಟ್ಟು ಕರಕಲಾಗಿದೆ.
ಅದೃಷ್ಟವಶಾತ್ ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.



