ಬಂಟ್ವಾಳ: ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನವೆಂಬರ್ 11ರಂದು ಸಾಮಾಜಿಕ ಪರಿಶೋಧನೆ ಗ್ರಾಮಸಭೆ ನಡೆಯಿತು.
ಸಭೆಯ ನೋಡಲ್ ಅಧಿಕಾರಿಯಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸಾಮಾಜಿಕ ಪರಿಶೋಧನೆ ತಾಲೂಕು ವ್ಯವಸ್ಥಾಪಕ ಹರೀಶ್ ಜಿ. ಅವರು ನರೇಗಾ, 15ನೇ ಹಣಕಾಸು ಯೋಜನೆ ಹಾಗೂ ರಾಜಸ್ವ ಅನುದಾನಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ತಾಲೂಕು ಐಇಸಿ ಸಂಯೋಜಕ ರಾಜೇಶ್ ಅವರು ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೈಗೊಳ್ಳಬಹುದಾದ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ನೀಡಿ, 2027-28ನೇ ಆರ್ಥಿಕ ಸಾಲಿನ ಕ್ರಿಯಾಯೋಜನೆಯಲ್ಲಿ ಸೇರಿಸಬೇಕಾದ ಕಾಮಗಾರಿಗಳಿಗಾಗಿ ಅರ್ಜಿ ಸಲ್ಲಿಸುವಂತೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳು ಸಾಮಾಜಿಕ ಪರಿಶೋಧನಾ ವರದಿಯನ್ನು ಸಭೆಯಲ್ಲಿ ವಾಚಿಸಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜೋಯಲ್ ಪ್ರಶಾಂತ್ ಫೆಲ್ಲೆರೋ ಸ್ವಾಗತಿಸಿ, ವಂದಿಸಿದರು. ವಿಬಿ-ಜಿ ರಾಮ್ ಜಿ ಯೋಜನೆಯ ಫಲಾನುಭವಿಗಳು, ಗ್ರಾಮ ಪಂಚಾಯತ್ ಎನ್ಆರ್ಎಲ್ಎಂ ಸಿಬ್ಬಂದಿ, ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



