ಮಂಗಳೂರು: ಮಾಂಡ್ ಸೊಭಾಣ್ ಸಂಸ್ಥೆಯ ವತಿಯಿಂದ ಮಂಗಳೂರಿನ ಟೌನ್ಹಾಲ್ನಲ್ಲಿ ಆಯೋಜಿಸಲಾಗಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ನಿರಂತರ ಗಾಯನ ಮಹೋತ್ಸವವು 200 ಗಂಟೆಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ.
300 ಗಂಟೆಗಳ ನಿರಂತರ ಕೊಂಕಣಿ ಗಾಯನದ ಮೂಲಕ ಜಾಗತಿಕ ದಾಖಲೆಯನ್ನು ನಿರ್ಮಿಸುವ ಗುರಿಯೊಂದಿಗೆ ನಡೆಯುತ್ತಿರುವ ಈ ಸಂಗೀತ ಮಹೋತ್ಸವಕ್ಕೆ ಸಂಗೀತಾಸಕ್ತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ನೂರಾರು ಗಾಯಕರ ಪಾಲ್ಗೊಳ್ಳುವಿಕೆಯೊಂದಿಗೆ ಕೊಂಕಣಿ ಸಂಗೀತದ ಶ್ರೀಮಂತ ಪರಂಪರೆ ಮತ್ತು ಸಾಂಸ್ಕೃತಿಕ ವೈಭವವನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನ ಮುಂದುವರಿದಿದೆ.



