ಮಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಸಂಸ್ಥೆಯ ನೇತೃತ್ವದಲ್ಲಿ ಸಸಿಹಿತ್ಲು ಬೀಚ್ನಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಅಭಿಯಾನದ ಸಂದರ್ಭದಲ್ಲಿ ಕಡಲತೀರದಲ್ಲಿ ಹರಡಿಕೊಂಡಿದ್ದ ಸುಮಾರು 140 ಬ್ಯಾಗ್ಗಳಷ್ಟು, ಅಂದಾಜು ಮೂರು ಕ್ವಿಂಟಾಲ್ ತ್ಯಾಜ್ಯವನ್ನು ಸಂಗ್ರಹಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಉತ್ಸಾಹದಿಂದ ಪಾಲ್ಗೊಂಡು ಕಡಲತೀರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಕೈಜೋಡಿಸಿದರು.
ದೀಪಾವಳಿಯ ಸಂದರ್ಭದಲ್ಲಿ ಪರಿಸರದ ಸ್ವಚ್ಛತೆ ಮತ್ತು ಕಡಲತೀರಗಳ ಸಂರಕ್ಷಣೆಯ ಮಹತ್ವವನ್ನು ಸಾರಿದ ಈ ಅಭಿಯಾನ ಸಾರ್ವಜನಿಕರ ಗಮನ ಸೆಳೆಯಿತು.



