ಮೊಳಕಾಲ್ಮೂರು: ದಿನಾಂಕ 05.11.2026 ರಂದು ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ IEC ಸಮಾಲೋಚಕರು ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಪುರ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಸ್ವಚ್ಛತಾ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಲತ್ಯಾಜ್ಯ ಸಂಸ್ಕರಣಾ ಘಟಕ (FSTP) ಕಾರ್ಯಾಚರಣೆಯನ್ನು ಆರಂಭಿಸುವ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸುವ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಾಹಿತಿ, ಶಿಕ್ಷಣ ಮತ್ತು ಸಂವಹನ (IEC) ಚಟುವಟಿಕೆಗಳನ್ನು ಆಯೋಜಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಅಲ್ಲದೆ, ಸಕ್ಕಿಂಗ್ ಮಷಿನ್ ಆಪರೇಟರ್ಗಳ ಸಭೆ ಆಯೋಜಿಸಿ, ಮಲತ್ಯಾಜ್ಯ ನಿರ್ವಹಣೆ (FSM) ಕುರಿತು ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಬಗ್ಗೆ ಚರ್ಚಿಸಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛ ವಾಹಿನಿ ಮೂಲಕ ಜಿಂಗಲ್ಸ್ ಪ್ರಸಾರ ಹಾಗೂ ಪೋಸ್ಟರ್ಗಳ ಅಳವಡಿಕೆಯ ಮೂಲಕ FSM ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ (PWM) ಘಟಕದಲ್ಲಿ ಯಂತ್ರೋಪಕರಣಗಳನ್ನು ಅಳವಡಿಸುವ ಉದ್ದೇಶದಿಂದ ಘಟಕದ ಅಳತೆ (Measurement) ಹಾಗೂ ಸ್ಥಳ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.




