ಬೆಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಸಂಸ್ಥೆಯು ಬೆಂಗಳೂರಿನ ದೇವನಗುಂದಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಮಾರ್ಕೆಟಿಂಗ್ ಟರ್ಮಿನಲ್ ಇಂದು ಲೋಕಾರ್ಪಣೆಗೊಳ್ಳಲಿದೆ.
ಸುಮಾರು 330 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಟರ್ಮಿನಲ್ ಇಂಧನ ಸಂಗ್ರಹಣೆ ಮತ್ತು ಸಾಗಣೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಈ ಯೋಜನೆಯಿಂದ ಕರ್ನಾಟಕದಲ್ಲಿ ಇಂಧನ ಪೂರೈಕೆಯ ಸಾಮರ್ಥ್ಯ ಹೆಚ್ಚಲಿದ್ದು, ಮಾರುಕಟ್ಟೆ ವಿಸ್ತರಣೆಗೂ ಅನುಕೂಲವಾಗಲಿದೆ.
ಎಂಆರ್ಪಿಎಲ್ನ ಮಾರುಕಟ್ಟೆ ವಿಸ್ತರಣೆಯ ದೃಷ್ಟಿಯಿಂದ ಈ ಯೋಜನೆ ಮಹತ್ವದ ಹೆಜ್ಜೆಯಾಗಿದ್ದು, ರಾಜ್ಯದ ಇಂಧನ ವಿತರಣಾ ಜಾಲಕ್ಕೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ.



