ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದರು.



