ಮಂಗಳೂರು: ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿಕಲಚೇತನರಿಗೆ ಉಚಿತವಾಗಿ ವೀಲ್ಚೇರ್ ಹಾಗೂ ಊರುಗೋಲುಗಳನ್ನು ವಿತರಿಸಲು ನಿರ್ಧರಿಸಲಾಗಿದೆ.
ಡಿ.3ರಂದು ಈ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಅರ್ಹ ಫಲಾನುಭವಿಗಳು ಅಥವಾ ಅವರ ಕುಟುಂಬದ ಸದಸ್ಯರು ತಮ್ಮ ವಿವರಗಳನ್ನು ನವೆಂಬರ್ 25ರೊಳಗೆ ಸಲ್ಲಿಸುವಂತೆ ಮನವಿ ಮಾಡಲಾಗಿದೆ.
ಅರ್ಜಿಗಳನ್ನು ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣ, ಓಲ್ಡ್ ಪೋರ್ಟ್ ರಸ್ತೆ, ಮಂಗಳೂರು–1 ಇಲ್ಲಿಗೆ ಸಲ್ಲಿಸಬಹುದು. ಇ-ಮೇಲ್ ಅಥವಾ ವಾಟ್ಸ್ಆ್ಯಪ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ:
- ಇ-ಮೇಲ್: ircsdkd@gmail.com
- ವಾಟ್ಸ್ಆ್ಯಪ್: 96068 66210
ಹೆಚ್ಚಿನ ಅರ್ಹ ಫಲಾನುಭವಿಗಳಿಗೆ ಈ ಸೌಲಭ್ಯ ತಲುಪಿಸುವ ಉದ್ದೇಶದಿಂದ ಸಾರ್ವಜನಿಕರು ಮಾಹಿತಿ ಹಂಚಿಕೊಳ್ಳುವಂತೆ ರೆಡ್ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



