ಬೆಂಗಳೂರು: ನಗರದ ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಲೈನ್ ಮೆಟ್ರೋ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.
ಉದ್ಘಾಟನೆಯ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಿಂಕ್ ಲೈನ್ನ ಮಾದರಿ ನಕ್ಷೆಯ ಮೂಲಕ ಮೆಟ್ರೋ ಮಾರ್ಗ, ನಿಲ್ದಾಣಗಳು ಹಾಗೂ ಸಂಪರ್ಕ ವ್ಯವಸ್ಥೆಯ ಕುರಿತು ಪ್ರಧಾನಮಂತ್ರಿಗೆ ವಿವರಿಸಿದರು.
ಪಿಂಕ್ ಲೈನ್ ಆರಂಭದಿಂದ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಬಲ ದೊರೆಯುವ ನಿರೀಕ್ಷೆಯಿದೆ.



