ಕೊಡಗು: ಕುಶಾಲನಗರ ತಾಲ್ಲೂಕಿನ ಹಾರಂಗಿ ಜಲಾಶಯದ ಸಮೀಪ ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಪ್ರತ್ಯಕ್ಷವಾಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಹಾರಂಗಿ ಜಲಾಶಯ ಹಾಗೂ ಸಾಕಾನೆ ಶಿಬಿರಕ್ಕೆ ತೆರಳುವ ಮುಖ್ಯ ರಸ್ತೆಯಲ್ಲೇ ಕಾಡಾನೆ ಕಾಣಿಸಿಕೊಂಡಿದೆ. ರಸ್ತೆಯ ಒಂದು ಕಡೆಯಿಂದ ಮತ್ತೊಂದು ಕಡೆಗೆ ರಾಜಾರೋಷವಾಗಿ ದಾಟಿದ ಆನೆಯನ್ನು ಕಂಡು ವಾಹನ ಸವಾರರು, ಪ್ರವಾಸಿಗರು ಹಾಗೂ ಸ್ಥಳೀಯ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಜನನಿಬಿಡ ಪ್ರದೇಶದ ಪ್ರಮುಖ ರಸ್ತೆಯಲ್ಲೇ ಕಾಡಾನೆ ಸಂಚರಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಉಂಟಾಗಿದೆ. ಈ ಭಾಗದಲ್ಲಿ ಕಾಡಾನೆಗಳ ಸಂಚಾರದ ಬಗ್ಗೆ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ವಾಹನ ಸವಾರರು ಮತ್ತು ಪ್ರವಾಸಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರ



