ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಟೋಲ್ಗೇಟ್ ನಿಯಮಬಾಹಿರವಾಗಿದ್ದು, ಅದನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ 24 ಗಂಟೆಗಳ ಹಗಲು-ರಾತ್ರಿ ಧರಣಿ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ, ಬ್ರಹ್ಮರಕೂಟ್ಲು ಟೋಲ್ಗೇಟ್ ಅನ್ನು ಸಮರ್ಥಿಸುವ ಮಾತುಗಳಿವೆಯೇ ಎಂದು ಪ್ರಶ್ನಿಸಿದರು. ಇಲ್ಲಿ ಟೋಲ್ಗೇಟ್ ಅಗತ್ಯವಿಲ್ಲ ಎಂಬುದು ನಿಮ್ಮ ಅಂತರಾತ್ಮಕ್ಕೂ ತಿಳಿದಿರಬಹುದು ಎಂದು ಸಂಬಂಧಪಟ್ಟವರನ್ನು ಕುಟುಕಿದರು.
ಟೋಲ್ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ನಡೆದ ಧರಣಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿದಂತೆ ಅನೇಕರು ಭಾಗವಹಿಸಿದರು.



