ಬೆಳ್ತಂಗಡಿ: ಪುಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಜಕೀಯ ಪ್ರೇರಿತ ಹಾಗೂ ದ್ವೇಷಭಾವನೆ ಮೂಡಿಸುವ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿದೆ.
ನ.16ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದ್ದು, ನ.14ರಂದು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಶಾಸಕ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಹಾಗೂ ವಿದ್ಯಾರ್ಥಿಗಳಿಂದ ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶಾಲಾ ಮಕ್ಕಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುವುದು ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣ ಸಂಸ್ಥೆಗಳ ಘನತೆಗೆ ಧಕ್ಕೆ ತರುವ ವಿಚಾರವಾಗಿದೆ ಎಂದು ಯುವ ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ.
ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ನವೀನ್ ಕುಮಾರ್ ಕೆ. ಅವರು ಪುಂಜಾಲಕಟ್ಟೆ ಪೊಲೀಸ್ ಠಾಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಅಝರ್ ನಾವೂರು, ಜೋಶಿಲ್ ಲಾಯಿಲ ಹಾಗೂ ನಜೀರ್ ಉಪಸ್ಥಿತರಿದ್ದರು.
ಪುಂಜಾಲಕಟ್ಟೆ ಶಾಲಾ ಕಾರ್ಯಕ್ರಮದಲ್ಲಿ ರಾಜಕೀಯ ದ್ವೇಷ ಭಾಷಣ ಆರೋಪ: ಶಾಸಕ ಹರೀಶ್ ಪೂಂಜಾ ವಿರುದ್ಧ ಯುವ ಕಾಂಗ್ರೆಸ್ ದೂರು
Next Article
ನ.22ರಂದು 26ನೇ ವರ್ಷದ ರೋಟರಿ ಚಿಣ್ಣರ ಉತ್ಸವ
ನ.22ರಂದು 26ನೇ ವರ್ಷದ ರೋಟರಿ ಚಿಣ್ಣರ ಉತ್ಸವ

