ತಿರುನೆಲ್ವೇಲಿ: ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಚಿಕನ್ ಬಿರಿಯಾನಿ ತಿನ್ನುತ್ತಿರುವ ಗಣೇಶನ ಬ್ಯಾನರ್ ಹಾಕಿದ್ದ ಅಂಗಡಿಯ ಮಾಲೀಕರೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ವಿನಾಯಕ ಚತುರ್ಥಿಯ ಪ್ರಯುಕ್ತ ಪ್ರಚಾರಕ್ಕಾಗಿ, ತಿರುನೆಲ್ವೇಲಿ-ತಿರುಚೆಂದೂರ್ ಮುಖ್ಯ ರಸ್ತೆಯಲ್ಲಿರುವ ವಿಎಂ ಛತ್ರಂ ಬಳಿಯ ‘ದಿಂಡಿಗಲ್ ಕಲ್ಯಾಣ ಬಿರಿಯಾನಿ’ ಅಂಗಡಿಯ ಹೊರಗೆ ಈ ಬ್ಯಾನರ್ ಅನ್ನು ಹಾಕಲಾಗಿತ್ತು.
ಹಬ್ಬದ ಅವಧಿಯಲ್ಲಿ ಗ್ರಾಹಕರನ್ನು ಆಕರ್ಷಿಸುವ ಉದ್ದೇಶದಿಂದ, ಗಣೇಶನು ಬಿರಿಯಾನಿ ತಯಾರಿಸುತ್ತಿರುವ ಫೋಟೋವನ್ನು ಇದರಲ್ಲಿ ಬಳಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬ್ಯಾನರ್ ವೈರಲ್ ಆಗುತ್ತಿದ್ದಂತೆಯೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಸ್ಥಳೀಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.



