ಉಡುಪಿ: ‘ನೆನಪಿರಲಿ’ ಖ್ಯಾತಿಯ ಚಿತ್ರನಟ ಪ್ರೇಮ್ ಅವರು ದಂಪತಿ ಸಮೇತ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ನಟ ಪ್ರೇಮ್ ಹಾಗೂ ಅವರ ಪತ್ನಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪರ್ಯಾಯ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಶ್ರೀಕೃಷ್ಣನ ದರ್ಶನ ಪಡೆದ ಅವರು, ಮಠದ ಧಾರ್ಮಿಕ ಹಾಗೂ ಆಧ್ಯಾತ್ಮಿಕ ವಾತಾವರಣವನ್ನು ಅನುಭವಿಸಿದರು.
ಬಳಿಕ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿಯಾದ ಪ್ರೇಮ್ ದಂಪತಿ, ಶ್ರೀಪಾದರಿಂದ ಫಲ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಆಶೀರ್ವಾದ ಪಡೆದರು. ಈ ವೇಳೆ ಮಠದ ವತಿಯಿಂದ ಅವರಿಗೆ ಗೌರವಪೂರ್ವಕವಾಗಿ ಪ್ರಸಾದ ನೀಡಲಾಯಿತು.



