Close Menu
    Latest Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಹಗಲು ದರೋಡೆ’: ಮಾಜಿ ಶಾಸಕ ರಘುಪತಿ ಭಟ್ ಆರೋಪ ಪ್ರವಾಸಿ ಟ್ಯಾಕ್ಸಿಗಳಿಗೆ ಡ್ರಾಪ್ ಶುಲ್ಕ ₹50, ಪಿಕ್‌ಅಪ್‌ಗೆ ₹180 ವಸೂಲಿ; 10 ದಿನಗಳ ಗಡುವು
    ಸುದ್ದಿ

    ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಹಗಲು ದರೋಡೆ’: ಮಾಜಿ ಶಾಸಕ ರಘುಪತಿ ಭಟ್ ಆರೋಪ ಪ್ರವಾಸಿ ಟ್ಯಾಕ್ಸಿಗಳಿಗೆ ಡ್ರಾಪ್ ಶುಲ್ಕ ₹50, ಪಿಕ್‌ಅಪ್‌ಗೆ ₹180 ವಸೂಲಿ; 10 ದಿನಗಳ ಗಡುವು

    navabharathaBy navabharathaOctober 14, 2026

    ಮಂಗಳೂರು: ಅದಾನಿ ಸಂಸ್ಥೆಯ ನಿರ್ವಹಣೆಯಲ್ಲಿರುವ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ಟ್ಯಾಕ್ಸಿ ವಾಹನಗಳಿಂದ ಅವೈಜ್ಞಾನಿಕವಾಗಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದು ‘ಹಗಲು ದರೋಡೆ’ಗೆ ಸಮಾನವಾಗಿದೆ ಎಂದು ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.

    ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸಿ ಟ್ಯಾಕ್ಸಿಗಳು ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಗುಣಮಟ್ಟದ, ತ್ವರಿತ ಹಾಗೂ ಸುರಕ್ಷಿತ ಸಾರಿಗೆ ಸೇವೆ ಒದಗಿಸುತ್ತಿವೆ. ಸಂಚಾರ ಮತ್ತು ಪೊಲೀಸ್ ನಿಯಮಗಳನ್ನು ಪಾಲಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ಟ್ಯಾಕ್ಸಿ ಚಾಲಕರು, ಜಿಲ್ಲೆಯಲ್ಲೇ ಆ್ಯಗ್ರಿಗೇಟರ್ ಸೇವೆಗಳು ಲಭ್ಯವಿದ್ದರೂ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಹೇಳಿದರು.

    ಆದರೆ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗ್ರಾಹಕರನ್ನು ಕರೆತರುವಾಗ ಮತ್ತು ಬಿಡುವಾಗ ಪ್ರವಾಸಿ ವಾಹನಗಳು ಅನಗತ್ಯ ತೊಂದರೆಗಳನ್ನು ಎದುರಿಸುತ್ತಿವೆ. ಪಾರ್ಕಿಂಗ್ ಶುಲ್ಕದ ವಿಚಾರದಲ್ಲಿ ಖಾಸಗಿ ಕಾರುಗಳು ಮತ್ತು ಪ್ರವಾಸಿ ವಾಹನಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ. ಈ ಬಗ್ಗೆ ಕಾವೂರು ಜಂಕ್ಷನ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದರೂ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಡ್ರಾಪ್ ಮಾಡಿದರೂ ₹50 ಶುಲ್ಕ ವಸೂಲಿ

    ಪ್ರವಾಸಿ ವಾಹನಗಳು ಪ್ರಯಾಣಿಕರನ್ನು ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಿ ವಾಪಸ್ ತೆರಳುವಾಗಲೂ ₹50 ಶುಲ್ಕ ಪಾವತಿಸಬೇಕೆಂದು ವಸೂಲಿ ಮಾಡಲಾಗುತ್ತಿದೆ. ಮತ್ತೊಂದೆಡೆ, ಪ್ರಯಾಣಿಕರನ್ನು ಪಿಕ್‌ಅಪ್ ಮಾಡಲು ಪಾರ್ಕಿಂಗ್ ಲಾಟ್‌ಗೆ ತೆರಳದಿದ್ದರೂ ₹180 ಶುಲ್ಕ ಪಾವತಿಸಬೇಕಾಗಿದೆ ಎಂದು ಅವರು ಆರೋಪಿಸಿದರು.

    ಖಾಸಗಿ ಕಾರುಗಳಿಗೆ ಅನ್ವಯಿಸದ ಈ ಶುಲ್ಕಗಳನ್ನು ಪ್ರವಾಸಿ ವಾಹನಗಳಿಗೆ ಮಾತ್ರ ವಿಧಿಸುತ್ತಿರುವುದು ಏಕೆ ಎಂಬ ಪ್ರಶ್ನೆ ಎದುರಾಗಿದೆ. ಈ ರೀತಿಯ ಶುಲ್ಕ ವಸೂಲಿ ಸ್ವಂತ ವಾಹನಗಳ ಮೂಲಕ ಜೀವನೋಪಾಯ ಕಂಡುಕೊಳ್ಳುತ್ತಿರುವ ಸಣ್ಣ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರಿಗೆ ಆರ್ಥಿಕ ಹೊರೆಯಾಗುತ್ತಿದೆ. ಇದು ಅವರ ಸ್ವಯಂ ಉದ್ಯೋಗವನ್ನು ಸಂಕಷ್ಟಕ್ಕೆ ತಳ್ಳುವ ಪ್ರಯತ್ನವಾಗಿದೆ ಎಂದು ರಘುಪತಿ ಭಟ್ ಅಭಿಪ್ರಾಯಪಟ್ಟರು.

    10 ದಿನಗಳ ಗಡುವು

    ವಿಮಾನ ನಿಲ್ದಾಣದಲ್ಲಿನ ಶುಲ್ಕ ವಸೂಲಿ ವ್ಯವಸ್ಥೆಯಲ್ಲಿರುವ ಅವ್ಯವಸ್ಥೆಗಳನ್ನು ಸರಿಪಡಿಸಿ, ಸ್ಥಳೀಯ ಟ್ಯಾಕ್ಸಿ ಉದ್ಯಮವನ್ನು ಪ್ರೋತ್ಸಾಹಿಸಬೇಕು ಎಂದು ಅವರು ಆಗ್ರಹಿಸಿದರು.

    ಈ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಟ್ಯಾಕ್ಸಿಮನ್ ಹಾಗೂ ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್‌ಗಳು ಸೇರಿದಂತೆ ಉಭಯ ಜಿಲ್ಲೆಗಳ ಸಮಾನ ಮನಸ್ಕ ಸಂಘಟನೆಗಳನ್ನು ಒಗ್ಗೂಡಿಸಿ, ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ಅದಾನಿ ಸಂಸ್ಥೆಗೆ 10 ದಿನಗಳ ಗಡುವು ನೀಡಲಾಗುವುದು. ಈ ಅವಧಿಯೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಸ್ಥಳೀಯ ಪ್ರವಾಸಿ ಟ್ಯಾಕ್ಸಿ ಉದ್ಯಮದ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ಚಾಲಕರು ಮತ್ತು ವಾಹನ ಮಾಲೀಕರಿಗೆ ನ್ಯಾಯ ದೊರಕಿಸಿಕೊಡಲು ಸಂಬಂಧಪಟ್ಟ ಆಡಳಿತ ಮಂಡಳಿ ತಕ್ಷಣ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದರು.

    Previous Articleಅ.15: ತುಳು ಭವನದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿಅ.15: ತುಳು ಭವನದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ
    Next Articleಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಕೊಲೆ: ಮಂಗಳೂರಲ್ಲಿ ಎಸ್ ಐಟಿ ಮೀಟಿಂಗ್ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಕೊಲೆ: ಮಂಗಳೂರಲ್ಲಿ ಎಸ್ ಐಟಿ ಮೀಟಿಂಗ್

    Related Posts

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ನ.6, 7ರಂದು ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವ

    November 2, 2026

    ಸೋಂದೆ ಜೈನ ಮಠ ; ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ₹50 ಲಕ್ಷ ದೇಣಿಗೆ

    November 2, 2026

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026
    Latest Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026
    ತಾಜಾ ಸುದ್ದಿಗಳು

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?

    November 2, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.