Close Menu
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಕಾವೂರು ಬಂಟರ ಭವನ ಉದ್ಘಾಟನೆಗೆ ಸಿದ್ಧತೆ: ರೂಪುರೇಷೆ ಕುರಿತು ವಿಶೇಷ ಸಭೆ
    ಸುದ್ದಿ

    ಕಾವೂರು ಬಂಟರ ಭವನ ಉದ್ಘಾಟನೆಗೆ ಸಿದ್ಧತೆ: ರೂಪುರೇಷೆ ಕುರಿತು ವಿಶೇಷ ಸಭೆ

    navabharathaBy navabharathaOctober 14, 2026

    ಮಂಗಳೂರು: ಕಾವೂರು ಬಂಟರ ಭವನದ ಉದ್ಘಾಟನಾ ಸಮಾರಂಭವನ್ನು ಜನವರಿ 29, 30 ಮತ್ತು 31ರಂದು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಯೋಜಿಸಲು ಸಿದ್ಧತೆಗಳು ನಡೆಯುತ್ತಿವೆ. ಕಾವೂರು–ಮಾಲಾಡಿ ಕೋರ್ಟ್ ಮುಖ್ಯ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವನದ ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಉದ್ಘಾಟನಾ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸುವ ಕುರಿತು ಭವನದ ಸಂಕೀರ್ಣದಲ್ಲಿ ಸಂಘದ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್ ಅವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಿತು.

    ಸಭೆಯಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ಡಿ. ಸುಧಾಕರ ಶೆಟ್ಟಿ ಮಾತನಾಡಿ, ಸುಮಾರು ₹13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಭವನದ ಕಾಮಗಾರಿ ಅಂತಿಮ ಹಂತ ತಲುಪಿದೆ. ಆದರೆ, ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಆರ್ಥಿಕ ಕೊರತೆ ಎದುರಾಗಿದ್ದು, ಈ ಕೊರತೆಯನ್ನು ನೀಗಿಸಲು ಸಮಾಜದ ಎಲ್ಲ ಬಂಟ ಬಾಂಧವರು ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದರು.

    ಕಟ್ಟಡ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಧಾಕರ ಆಳ್ವ ಅವರು ಮೂರು ದಿನಗಳ ಉದ್ಘಾಟನಾ ಸಮಾರಂಭದಲ್ಲಿ ಆಯೋಜಿಸಲಾಗುವ ವಿವಿಧ ಕಾರ್ಯಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಿದರು.

    ಕಾವೂರು ಮೈದಾನದಿಂದ ಭವನದವರೆಗೆ ಹೊರೆಕಾಣಿಕೆ ಮೆರವಣಿಗೆ

    ಉದ್ಘಾಟನಾ ಸಮಾರಂಭದ ಅಂಗವಾಗಿ ಕಾವೂರು ಮೈದಾನದಿಂದ ಬಂಟರ ಭವನದವರೆಗೆ ಭವ್ಯ ಹೊರೆಕಾಣಿಕೆ ಮೆರವಣಿಗೆ ಆಯೋಜಿಸಲಾಗುವುದು. ಮೆರವಣಿಗೆಯ ಜವಾಬ್ದಾರಿ ವಹಿಸಿಕೊಂಡಿರುವ ಎಂ.ಎಸ್. ಶೆಟ್ಟಿ ಸರಪಾಡಿ ಅವರು ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಸಮಾಜದ ಎಲ್ಲ ಬಾಂಧವರು ಮೆರವಣಿಗೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.

    ಭವನವನ್ನು ಋಣಮುಕ್ತಗೊಳಿಸಲು ಎಲ್ಲರ ಸಹಕಾರ ಅಗತ್ಯ

    ಸಂಘದ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್ ಮಾತನಾಡಿ, ಕಟ್ಟಡ ಸಮಿತಿಯ ಅಧ್ಯಕ್ಷ ಡಿ. ಸುಧಾಕರ ಶೆಟ್ಟಿ ಅವರ ನಿರಂತರ ಪರಿಶ್ರಮ ಮತ್ತು ಕಾರ್ಯತತ್ಪರತೆಯಿಂದ ಭವನದ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಆದರೂ ಕಾಮಗಾರಿಗೆ ಸಂಬಂಧಿಸಿದಂತೆ ಇನ್ನೂ ಸಾಕಷ್ಟು ಹಣ ಪಾವತಿಸಲು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಸಮಾಜದ ಎಲ್ಲರೂ ತುರ್ತಾಗಿ ಕೈಜೋಡಿಸಿ, ಆರ್ಥಿಕ ಹೊಣೆಗಾರಿಕೆಯನ್ನು ನಿಭಾಯಿಸುವ ಮೂಲಕ ಭವನವನ್ನು ಋಣಮುಕ್ತಗೊಳಿಸಲು ಸಹಕರಿಸಬೇಕು ಎಂದು ಕರೆ ನೀಡಿದರು.

    ‘ಬಂಟ ಬೆಳಕು’ ಸ್ಮರಣ ಸಂಚಿಕೆ ಬಿಡುಗಡೆ

    ಕಾವೂರು ಬಂಟರ ಸಂಘವು ಕಳೆದ 25 ವರ್ಷಗಳಲ್ಲಿ ಬೆಳೆದು ಬಂದ ಹಾದಿ, ಸಂಘದ ಸಾಧನೆಗಳು ಹಾಗೂ ವಿವಿಧ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಒಳಗೊಂಡ ‘ಬಂಟ ಬೆಳಕು’ ಸ್ಮರಣ ಸಂಚಿಕೆಯನ್ನು ಉದ್ಘಾಟನಾ ಸಮಾರಂಭದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಯಿತು.

    ಸಭೆಯಲ್ಲಿ ಸಂಘ ಹಾಗೂ ಕಟ್ಟಡ ಸಮಿತಿಯ ಪದಾಧಿಕಾರಿಗಳಾದ ಅವಿನಾಶ್ ನಾಯಕ್, ವಿಠಲ ಆಳ್ವ, ಶಂಭು ಶೆಟ್ಟಿ, ಲಕ್ಷ್ಮೀನಾರಾಯಣ ಶೆಟ್ಟಿ, ಸುಜಯ ಎಸ್. ಶೆಟ್ಟಿ, ರೇಖಾ ವಿ. ಶೆಟ್ಟಿ, ಶ್ಯಾಮಲಾ ಶೆಟ್ಟಿ ಹಾಗೂ ಮಾಧ್ಯಮ ವಕ್ತಾರ ಮುಲ್ಕಿ ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.

    Previous Articleಕಾಂಗ್ರೆಸ್ ಆಡಳಿತದಲ್ಲಿ ‘ಭಾರತ್ ಮಾತಾ ಕೀ ಜೈ’ ಎನ್ನುವುದು ಮಹಾಪರಾಧವೇ? – ಶಾಸಕ ವೇದವ್ಯಾಸ ಕಾಮತ್ ಪ್ರಶ್ನೆಕಾಂಗ್ರೆಸ್ ಆಡಳಿತದಲ್ಲಿ ‘ಭಾರತ್ ಮಾತಾ ಕೀ ಜೈ’ ಎನ್ನುವುದು ಮಹಾಪರಾಧವೇ? – ಶಾಸಕ ವೇದವ್ಯಾಸ ಕಾಮತ್ ಪ್ರಶ್ನೆ
    Next Articleಮಳೆಗಾಗಿ ಕಪ್ಪೆಗಳ ಮದುವೆ: ಮಳೆರಾಯನ ಒಲಿಸಲು ರೈತರ ವಿಶಿಷ್ಟ ಪ್ರಯತ್ನ!  ಕಡೂರು: ಮಳೆಗಾಗಿ ಕಪ್ಪೆಗಳ ಮದುವೆ ಮಾಡಿಸಿದ ಬಯಲುಸೀಮೆ ಭಾಗದ ರೈತರುಮಳೆಗಾಗಿ ಕಪ್ಪೆಗಳ ಮದುವೆ: ಮಳೆರಾಯನ ಒಲಿಸಲು ರೈತರ ವಿಶಿಷ್ಟ ಪ್ರಯತ್ನ! ಕಡೂರು: ಮಳೆಗಾಗಿ ಕಪ್ಪೆಗಳ ಮದುವೆ ಮಾಡಿಸಿದ ಬಯಲುಸೀಮೆ ಭಾಗದ ರೈತರು

    Related Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    ತಾಜಾ ಸುದ್ದಿಗಳು

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.