ಮಂಗಳೂರು: ಕೊರಗ ಸಮುದಾಯದ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸಿ, ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಮಂಗಳೂರಿನಲ್ಲಿ ಇಂದು ಅರೆಬೆತ್ತಲೆ ಮೆರವಣಿಗೆ ನಡೆಯಿತು.
ಕರ್ನಾಟಕ ಆದಿವಾಸಿಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಕೊರಗ ಸಮುದಾಯದ ಅನೇಕರು ಪಾಲ್ಗೊಂಡು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ವಾಮಂಜೂರಿನಿಂದ ಆರಂಭವಾದ ಪಾದಯಾತ್ರೆಯು ಪಂಪ್ವೆಲ್ ಮೂಲಕ ಪಡೀಲ್ವರೆಗೆ ಸಾಗಿತು. ಸಮುದಾಯದ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಿ, ಹಕ್ಕುಪತ್ರ ವಿತರಿಸುವ ಮೂಲಕ ಅವರ ಮೂಲಭೂತ ಹಕ್ಕುಗಳನ್ನು ಖಾತರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.



