ಮೃತರನ್ನು ಮುಹಮ್ಮದ್ ಝುನೈದ್ ಮತ್ತು ಮೊಹಮ್ಮದ್ ಅಫ್ರಾಝ್ ಎಂದು ಗುರುತಿಸಲಾಗಿದೆ. ಘಟನೆಗೂ ಮುನ್ನ ರಂತಡ್ಕ ಕ್ರಾಸ್ನಲ್ಲಿ ಇಬ್ಬರು ಯುವಕರು ಹಾಗೂ ಪಿಕಪ್ ಚಾಲಕ ಹಫೀಜ್ ಅಲಿಯಾಸ್ ಅಪ್ಪಿ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಬಳಿಕ ಯುವಕರು ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಚಾಲಕ ಅವರನ್ನು ಹಿಂಬಾಲಿಸಿ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಕೊಣಾಜೆ ಪೊಲೀಸರು ಆರೋಪಿ ಹಫೀಜ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103(1)ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.



