ಮಂಗಳೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅಕ್ಟೋಬರ್ 21ರಂದು ನಡೆಯಲಿರುವ ಆಕರ್ಷಕ ಶೋಭಾಯಾತ್ರೆಗೆ ಕುಡ್ಲ ಸಜ್ಜಾಗಿದೆ. ವರ್ಣರಂಜಿತ ಸ್ತಬ್ಧಚಿತ್ರಗಳು, ಆಕರ್ಷಕ ಹುಲಿವೇಷ ಕುಣಿತ, ರೋಮಾಂಚನಕಾರಿ ಚೆಂಡೆ ವಾದನ ಸೇರಿದಂತೆ ವಿವಿಧ ಕಲಾ ತಂಡಗಳ ಪ್ರದರ್ಶನಗಳು ಶೋಭಾಯಾತ್ರೆಯ ಮೆರುಗನ್ನು ಹೆಚ್ಚಿಸಲಿವೆ.
ಕರಾವಳಿಯ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಕಲಾ ವೈಭವವನ್ನು ಪ್ರತಿಬಿಂಬಿಸುವ ಮಂಗಳೂರು ದಸರಾ ಶೋಭಾಯಾತ್ರೆಯನ್ನು ಕಣ್ತುಂಬಿಕೊಳ್ಳಲು ಜನರು ಕಾತರದಿಂದ ಕಾಯುತ್ತಿದ್ದಾರೆ. ನಗರದೆಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದ್ದು, ಕುಡ್ಲ ಮತ್ತೊಮ್ಮೆ ದಸರಾ ಸಂಭ್ರಮದಲ್ಲಿ ಮಿಂದೇಳಲು ಸಿದ್ಧವಾಗಿದೆ.



