Close Menu
    Latest Posts

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ

    Nava Bharatha MediaNava Bharatha Media
    Home » ಮಂಗಳೂರು: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ಶುಲ್ಕದ ಸುಲಿಗೆಗೆ ಕಡಿವಾಣ ಹಾಕಿ – ಡಿವೈಎಫ್‌ಐ ಆಗ್ರಹ
    ಸುದ್ದಿ

    ಮಂಗಳೂರು: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ಶುಲ್ಕದ ಸುಲಿಗೆಗೆ ಕಡಿವಾಣ ಹಾಕಿ – ಡಿವೈಎಫ್‌ಐ ಆಗ್ರಹ

    navabharathaBy navabharathaOctober 23, 2026

    ಮಂಗಳೂರು: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ಶುಲ್ಕದ ಸುಲಿಗೆಯಿಂದ ಜನಸಾಮಾನ್ಯರು ತತ್ತರಿಸುತ್ತಿರುವಾಗ, ಹಳೆಯ ಕಾಯ್ದೆಯ ನಿಯಮಗಳನ್ನು ಓದಿ ಹೇಳಿಕೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಿ, ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಜನರಿಗೆ ನ್ಯಾಯ ಒದಗಿಸಬೇಕು ಎಂದು ಡಿವೈಎಫ್‌ಐ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

    ಆರೋಗ್ಯ ಸಚಿವ ಯು.ಟಿ. ಖಾದರ್ ಅವರು 2007ರಿಂದ ಜಾರಿಯಲ್ಲಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (KPME Act) ಕುರಿತು ಈಗ ಹೇಳಿಕೆ ನೀಡುತ್ತಿರುವುದು ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನದಂತಿದೆ ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಸಂತೋಷ್ ಬಜಾಲ್ ಟೀಕಿಸಿದ್ದಾರೆ.

    ಒಂದೇ ಚಿಕಿತ್ಸೆಗೆ ವಿವಿಧ ಆಸ್ಪತ್ರೆಗಳಲ್ಲಿ ವಿಭಿನ್ನ ದರ ವಿಧಿಸುವುದು, ಅನಗತ್ಯ ಪರೀಕ್ಷೆಗಳ ಹೊರೆ, ಜನಸಾಮಾನ್ಯರಿಗೆ ಕೈಗೆಟುಕದ ಚಿಕಿತ್ಸಾ ವೆಚ್ಚ ಹಾಗೂ ಆಸ್ಪತ್ರೆಯಿಂದ ಬಿಡುಗಡೆಯಾಗುವವರೆಗೂ ಕಾಡುವ ಬಿಲ್‌ಗಳ ಆತಂಕ ಜನರನ್ನು ಸಂಕಷ್ಟಕ್ಕೆ ದೂಡಿವೆ. ಇಂತಹ ಸಮಸ್ಯೆಗಳಿಗೆ ಕಡಿವಾಣ ಹಾಕುವ ಜವಾಬ್ದಾರಿ ಸರ್ಕಾರದ್ದಾಗಿದೆ. ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಈವರೆಗೆ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಆರೋಗ್ಯ ಸಚಿವರು ಜನರಿಗೆ ತಿಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಡಿವೈಎಫ್‌ಐ 2015ರಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಚಿಕಿತ್ಸಾ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರಕಟಿಸುವಂತೆ ಆಗ್ರಹಿಸುತ್ತಾ ಬಂದಿದೆ. ಈ ಬೇಡಿಕೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದರೂ, ಜನರಿಗೆ ಪೂರ್ಣ ಪ್ರಮಾಣದ ಪರಿಹಾರ ದೊರೆತಿಲ್ಲ. ಹೀಗಾಗಿ, ಈ ಹಿಂದೆಯೇ ಎತ್ತಿದ್ದ ಬೇಡಿಕೆಗಳನ್ನು ಕೇವಲ ಹೇಳಿಕೆಗಳಿಗೆ ಸೀಮಿತಗೊಳಿಸದೆ ಅನುಷ್ಠಾನಗೊಳಿಸಬೇಕು ಎಂದು ಸಂತೋಷ್ ಬಜಾಲ್ ಹೇಳಿದ್ದಾರೆ.

    ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ, ಅಗತ್ಯ ವೈದ್ಯರು, ತಜ್ಞ ವೈದ್ಯರು, ಔಷಧಗಳು, ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಮೂಲಸೌಕರ್ಯಗಳನ್ನು ಒದಗಿಸಬೇಕು. ಅಲ್ಲದೆ, ಪ್ರತಿ ಜಿಲ್ಲೆಯಲ್ಲೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ನಿಮಾನ್ಸ್‌ನಂತಹ ವಿಶೇಷ ಚಿಕಿತ್ಸಾ ಸಂಸ್ಥೆಗಳ ಘಟಕಗಳನ್ನು ಆರಂಭಿಸಿ, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ತಮ್ಮ ಜಿಲ್ಲೆಯಲ್ಲೇ ಕೈಗೆಟುಕುವ ದರದಲ್ಲಿ ವಿಶೇಷ ಚಿಕಿತ್ಸೆ ದೊರೆಯುವಂತೆ ಮಾಡಬೇಕು ಎಂದು ಡಿವೈಎಫ್‌ಐ ಆಗ್ರಹಿಸಿದೆ.

    KPME ಕಾಯ್ದೆಯಡಿ ಕಾರ್ಯನಿರ್ವಹಿಸುವ ಜಿಲ್ಲಾ ಮಟ್ಟದ ನಿಯಂತ್ರಣ ಪ್ರಾಧಿಕಾರಗಳಿಗೆ ಹೆಚ್ಚಿನ ಅಧಿಕಾರ, ಸಿಬ್ಬಂದಿ ಮತ್ತು ಅಗತ್ಯ ಸಂಪನ್ಮೂಲಗಳನ್ನು ಒದಗಿಸಬೇಕು. ಅನಗತ್ಯ ಪರೀಕ್ಷೆಗಳು, ಅಕ್ರಮ ಶುಲ್ಕ ವಸೂಲಿ, ತಪ್ಪಾದ ಚಿಕಿತ್ಸಾ ಕ್ರಮಗಳು ಹಾಗೂ ಕಾಯ್ದೆಯ ಉಲ್ಲಂಘನೆಗಳ ಕುರಿತು ಬರುವ ದೂರುಗಳನ್ನು ತ್ವರಿತವಾಗಿ ತನಿಖೆ ನಡೆಸಿ, ತಪ್ಪಿತಸ್ಥ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

    ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಒತ್ತಡಕ್ಕೆ ಮಣಿಯದೆ ಜನರ ಪರವಾಗಿ ನಿಲ್ಲುವ ಧೈರ್ಯವನ್ನು ಆರೋಗ್ಯ ಸಚಿವರು ಪ್ರದರ್ಶಿಸಬೇಕು. ಹಳೆಯ ಕಾಯ್ದೆಯ ನಿಯಮಗಳನ್ನು ಓದಿ ಹೇಳುವುದಕ್ಕಿಂತ ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಿ, ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು ಎಂದು ಡಿವೈಎಫ್‌ಐ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ ಎಂದು ಸಂತೋಷ್ ಬಜಾಲ್ ತಿಳಿಸಿದ್ದಾರೆ.

    Previous Articleಉಡುಪಿ: ಉದ್ಯಮಿಗಳಿಗೆ ಕೋಟ್ಯಂತರ ರೂ.ಗೆ ಬೇಡಿಕೆ, ಜೀವ ಬೆದರಿಕೆ: ಓರ್ವನ ಬಂಧನ  ಭೂಗತ ಪಾತಕಿ ಹೇಮಂತ ಪೂಜಾರಿಗೆ ಉದ್ಯಮಿಗಳ ಮೊಬೈಲ್‌ ಸಂಖ್ಯೆ, ಮಾಹಿತಿ ನೀಡಿದ ಆರೋಪ; ₹4.13 ಲಕ್ಷ ವಶಕ್ಕೆಉಡುಪಿ: ಉದ್ಯಮಿಗಳಿಗೆ ಕೋಟ್ಯಂತರ ರೂ.ಗೆ ಬೇಡಿಕೆ, ಜೀವ ಬೆದರಿಕೆ: ಓರ್ವನ ಬಂಧನ ಭೂಗತ ಪಾತಕಿ ಹೇಮಂತ ಪೂಜಾರಿಗೆ ಉದ್ಯಮಿಗಳ ಮೊಬೈಲ್‌ ಸಂಖ್ಯೆ, ಮಾಹಿತಿ ನೀಡಿದ ಆರೋಪ; ₹4.13 ಲಕ್ಷ ವಶಕ್ಕೆ
    Next Articleಮಂಗಳೂರಿನಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ 35ನೇ ವಾರ್ಷಿಕ ಮಹಾಸಭೆ ಅ. 28ರಂದುಮಂಗಳೂರಿನಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ 35ನೇ ವಾರ್ಷಿಕ ಮಹಾಸಭೆ ಅ. 28ರಂದು

    Related Posts

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026
    ತಾಜಾ ಸುದ್ದಿಗಳು

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.