ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನವು ಗ್ರಾಮೀಣ ಜನರ ಸರ್ವತೋಮುಖ ಅಭಿವೃದ್ಧಿ ಹಾಗೂ ಮಹಿಳೆಯರ ಸ್ವಾವಲಂಬನೆಗೆ ಒತ್ತು ನೀಡುತ್ತಾ ಕೃಷಿ, ಸ್ವಯಂ ಉದ್ಯೋಗ, ಶಿಕ್ಷಣ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.
ಮಹಾಸಭೆಯಲ್ಲಿ 2025-26ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು. ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಲೆಕ್ಕಪರಿಶೋಧಕರ ವರದಿ ಮಂಡನೆ ಹಾಗೂ ಸಂಬಂಧಿತ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, ಸಭಾಧ್ಯಕ್ಷರ ಅನುಮತಿಯ ಮೇರೆಗೆ ಇತರ ವಿಷಯಗಳನ್ನೂ ಚರ್ಚಿಸಲಾಗುವುದು ಎಂದು ರಾಜೇಂದ್ರ ರೈ ತಿಳಿಸಿದರು.



