ಮಂಗಳೂರು: ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಕುರಿತ ಚರ್ಚೆಗಳ ನಡುವೆಯೇ ರಘುಪತಿ ಭಟ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿರುವ ಅವರು, ಯಾವ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬುದರ ಬಗ್ಗೆ ಇನ್ನೂ ತಮ್ಮ ನಿಲುವನ್ನು ಪ್ರಕಟಿಸಿಲ್ಲ.



