ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ಅಕ್ಟೋಬರ್ 26ರಂದು ಬೆಳಿಗ್ಗೆ 10.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
