ಮಂಗಳೂರು : ಮಂಗಳೂರು ನಗರದ ವಿವಿಧ ವಾರ್ಡ್ಗಳಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ, ನಾಗರಿಕರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆಯೋಜಿಸಲಾಗುವ ‘ವಾಕ್ ವಿತ್ ಕಮಿಷನರ್’ ಕಾರ್ಯಕ್ರಮವು ಅಕ್ಟೋಬರ್ 29ರಂದು ನಡೆಯಲಿದೆ.
ಅಂದು ಬೆಳಿಗ್ಗೆ 7 ಗಂಟೆಯಿಂದ ಸುರತ್ಕಲ್ನ ಹೊಸಬೆಟ್ಟು ಪ್ರದೇಶದ ವಾರ್ಡ್ ಸಂಖ್ಯೆ 8ರಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.