ಕಾಸರಗೋಡು: ಕೇರಳ ರಾಜ್ಯದ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ಇದರ 37ನೇ ವಾರ್ಷಿಕ ಮಹಾಸಭೆಯ ಸಿದ್ಧತಾ ಸಭೆಯು ಕಾಸರಗೋಡು ಕನ್ನಡ ಗ್ರಾಮದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ಪ್ರತಿಷ್ಠಾನದ 2026-27ನೇ ಸಾಲಿನ 37ನೇ ವಾರ್ಷಿಕ ಮಹಾಸಭೆಯನ್ನು ಅಕ್ಟೋಬರ್ 25ರಂದು ಸಂಜೆ 5 ಗಂಟೆಗೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಯಿತು.
ನವೆಂಬರ್ 1ರಂದು ಬೆಳಿಗ್ಗೆ 9.30ಕ್ಕೆ ಕಾಸರಗೋಡು ಜಿಲ್ಲಾ ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಪ್ರತಿಷ್ಠಾನದ 36ನೇ ಸಂಸ್ಥಾಪನಾ ವರ್ಷಾಚರಣೆಯನ್ನು ನವೆಂಬರ್ 4ರಂದು ಸಂಜೆ 4 ಗಂಟೆಗೆ ನಡೆಸಲು ತೀರ್ಮಾನಿಸಲಾಗಿದೆ.

