ವಾಮಂಜೂರಿನ ಎಸ್.ಡಿ.ಎಂ. ಮಂಗಳಜ್ಯೋತಿ ಕೈಗಾರಿಕಾ ತರಬೇತಿ ಸಂಸ್ಥೆಯ ವತಿಯಿಂದ ಆಗಸ್ಟ್ 3ರಂದು ಆಯೋಜಿಸಲಾದ **‘ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭ–2026’**ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಸ್ತು, ಕೌಶಲ್ಯ ಮತ್ತು ಪರಿಶ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದ ಅವರು, ವಿದ್ಯಾರ್ಥಿಗಳ ಭವಿಷ್ಯದ ಯಶಸ್ಸಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಟಿವಿಎಸ್ ಮೋಟಾರ್ ಕಂಪನಿಯ ಇವಿ ತಾಂತ್ರಿಕ ಬೆಂಬಲ ಎಂಜಿನಿಯರ್ ವೀರಣ್ಣ ಗೌಡ ಕೆ.ಎಂ. ಅವರು ಮಾತನಾಡಿ, ತಾಂತ್ರಿಕ ಶಿಕ್ಷಣದಲ್ಲಿ ಕಠಿಣ ಪರಿಶ್ರಮ ಮತ್ತು ನಿರಂತರ ಕಲಿಕೆ ಬಹಳ ಮುಖ್ಯ. ತರಬೇತಿ ಅವಧಿಯಲ್ಲಿ ಪಡೆದುಕೊಳ್ಳುವ ತಾಂತ್ರಿಕ ಜ್ಞಾನ ಹಾಗೂ ಪ್ರಾಯೋಗಿಕ ಅನುಭವವು ಮುಂದಿನ ಉದ್ಯೋಗ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಅಂಗವಿಕಲರ ಕಲ್ಯಾಣ ಸಂಸ್ಥೆ (ರಿ.), ಮಂಗಳೂರಿನ ಕಾರ್ಯದರ್ಶಿ ಡಾ. ಎ. ರಾಜೇಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ನರೇಶ ಮಲ್ಲಿಗೆಮಾಡು ಹಾಗೂ ಮಂಗಳಜ್ಯೋತಿ ಸಮಗ್ರ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಹರಿಣಾಕ್ಷಿ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲ ನರೇಂದ್ರ ಸ್ವಾಗತಿಸಿದರು. ತರಬೇತಿ ಅಧಿಕಾರಿ ಪ್ರಫುಲ್ಲ ನೀತಿ-ನಿಯಮಗಳ ಕುರಿತು ಮಾಹಿತಿ ನೀಡಿದರು. ಸುರೇಖ ಕಾರ್ಯಕ್ರಮ ನಿರೂಪಿಸಿದರು. ಗಿರೀಶ್ ವಂದಿಸಿದರು


