ಕ್ರೈಸ್ಟ್ಚರ್ಚ್: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಗಾಯದ ಆಘಾತ ಎದುರಾಗಿದೆ. ವಿಕೆಟ್ಕೀಪರ್-ಬ್ಯಾಟರ್ ಇಶಾನ್ ಕಿಶನ್ ಗಾಯದ ಕಾರಣ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬಲ ತೊಡೆಯ ಒಳಭಾಗದ ಸ್ನಾಯುವಿನಲ್ಲಿ ಸಣ್ಣ ಪ್ರಮಾಣದ ಗಾಯವಾಗಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.
ಇಶಾನ್ ಕಿಶನ್ ಅನುಪಸ್ಥಿತಿಯಲ್ಲಿ 15 ವರ್ಷದ ಯುವ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಬಹುದೇ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಯುವ ಆಟಗಾರನ ಆಯ್ಕೆಯ ಕುರಿತು ತಂಡದ ಮ್ಯಾನೇಜ್ಮೆಂಟ್ನಿಂದ ಅಧಿಕೃತ ದೃಢೀಕರಣ ಹೊರಬಿದ್ದಿಲ್ಲ.
ಇಶಾನ್ ಕಿಶನ್ ಗಾಯದಿಂದಾಗಿ ಅಲಭ್ಯರಾಗಿರುವುದು ಖಚಿತವಾಗಿದ್ದರೂ, ಅವರ ಸ್ಥಾನಕ್ಕೆ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಭಾರತದ ಆರಂಭಿಕ ಬ್ಯಾಟಿಂಗ್ ಸಂಯೋಜನೆಯೂ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಹೀಗಾಗಿ ವೈಭವ್ ಸೂರ್ಯವಂಶಿಗೆ ಅವಕಾಶ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.



