ಮಂಗಳೂರು :ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಗಳ ಕ್ರೀಡಾಂಗಣದ ಅಭಿವೃದ್ಧಿಗೆ ₹20 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಈ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರೀಡಾಂಗಣದ ವಿಸ್ತೃತ ಯೋಜನಾ ವರದಿ ರೂಪಿಸುವ ಕುರಿತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮಂಗಳ ಕ್ರೀಡಾಂಗಣದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವುದು ಹಾಗೂ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರೀತಮ್, ಕಿರಿಯ ಅಭಿಯಂತರ ಹೇಮಂತ್, ವಾಸ್ತುಶಿಲ್ಪಿ ವೆಂಕಟೇಶ್ ಪೈ, ಮಂಗಳ ಅಥ್ಲೆಟಿಕ್ ಕ್ಲಬ್ನ ದಿನೇಶ್ ಕುಂದರ್, ಲಾರೆನ್ಸ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.



