ಆಂಧ್ರಪ್ರದೇಶ: ‘ಅರ್ನಬ್’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶದಲ್ಲಿ ಮೂವರು ಮೃತಪಟ್ಟಿದ್ದಾರೆ. ಚಂಡಮಾರುತದ ಅಪಾಯದ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ 87,000ಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ವಿಮಾನಗಳು ಹಾಗೂ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
ದಕ್ಷಿಣ ಕರಾವಳಿ ರೈಲ್ವೆ ಮುನ್ನೆಚ್ಚರಿಕಾ ಕ್ರಮವಾಗಿ 57 ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದು, ಇತರ 15 ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಿದೆ. ರದ್ದುಗೊಳಿಸಲಾದ ರೈಲುಗಳಲ್ಲಿ ವಂದೇ ಭಾರತ್ ರೈಲುಗಳೂ ಸೇರಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಚಂಡಮಾರುತದಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಹಾಗೂ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ರಾಜ್ಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.



