ಬೆಂಗಳೂರು: ರಾಜ್ಯದ 33 ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 5,431 ಪ್ರಥಮ ದರ್ಜೆ ಸಹಾಯಕರು (FDA) ಹಾಗೂ ದ್ವಿತೀಯ ದರ್ಜೆ ಸಹಾಯಕರು (SDA) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ.
ನೇಮಕಾತಿಗೆ ಸಂಬಂಧಿಸಿದಂತೆ ಅಕ್ಟೋಬರ್ 30ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ನವೆಂಬರ್ 26 ಕೊನೆಯ ದಿನ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಈ ನೇಮಕಾತಿ ಉತ್ತಮ ಅವಕಾಶವಾಗಿದ್ದು, ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಆಯ್ಕೆ ಪ್ರಕ್ರಿಯೆಯ ಕುರಿತು ಅಭ್ಯರ್ಥಿಗಳು ಕೆಇಎಯ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬೇಕು.



