ಮಂಗಳೂರು: ನಗರದ ನೆಹರು ಮೈದಾನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಸಂಭ್ರಮದಿಂದ ನಡೆಯಿತು. ಸಚಿವ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ 120 ಮಂದಿ ಸಾಧಕರು ಹಾಗೂ 53 ಸಂಘ-ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಸಮಾರಂಭದ ಅಂಗವಾಗಿ ಪೊಲೀಸ್, ಎನ್ಸಿಸಿ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬೃಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


