ಮಂಗಳೂರು: ರಾಜ್ಯ ಸರ್ಕಾರದ ‘ಗ್ರಾಮಾನುಭವ’ ಕಾರ್ಯಕ್ರಮದಡಿ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಸೀಮಂತೂರು ಕೃಷಿ ತೋಟಕ್ಕೆ ಭೇಟಿ ನೀಡಿ ಕೃಷಿ ಚಟುವಟಿಕೆಗಳು ಹಾಗೂ ಗ್ರಾಮೀಣ ಬದುಕಿನ ನೈಜ ಅನುಭವ ಪಡೆದುಕೊಂಡರು.
ಕೃಷಿ, ಪಶುಸಂಗೋಪನೆ, ಜಾನಪದ ಕಲೆ ಹಾಗೂ ಗ್ರಾಮೀಣ ಸಂಸ್ಕೃತಿಯ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 10 ಶಾಲೆಗಳು ಆಯ್ಕೆಯಾಗಿದ್ದು, ಸುಮಾರು 1,567 ವಿದ್ಯಾರ್ಥಿಗಳು ಜಿಲ್ಲೆಯ ವಿವಿಧ ಕೃಷಿ ಭೂಮಿಗಳಿಗೆ ಭೇಟಿ ನೀಡಲಿದ್ದಾರೆ. ಪಠ್ಯಪುಸ್ತಕದ ಜ್ಞಾನದ ಜತೆಗೆ ಕೃಷಿ ಬದುಕಿನ ನೈಜ ಅನುಭವ ಪಡೆಯಲು ಈ ಕಾರ್ಯಕ್ರಮ ಅವಕಾಶ ಕಲ್ಪಿಸಿದೆ.



