ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಯು ತಾಯಿ ಮತ್ತು ಮಗುವಿನ ಆರೋಗ್ಯ ಸೇವೆಯಲ್ಲಿ ಮತ್ತೊಮ್ಮೆ ಅತ್ಯುನ್ನತ ಸಾಧನೆ ಮಾಡಿದ್ದು, ರಾಜ್ಯ ಮಟ್ಟದ ಪ್ರಶಸ್ತಿಗೆ ಪಾತ್ರವಾಗಿದೆ. ಗರ್ಭಪಾತ ಮತ್ತು ಗರ್ಭಪಾತಾನಂತರದ ಆರೈಕೆಯಲ್ಲಿ ಶೇಕಡಾ ೧೦೦ ರಷ್ಟು ತಾಯಿ ಆರೋಗ್ಯ ಕಾಪಾಡಿ, ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ತಂದಿರುವುದಕ್ಕಾಗಿ ಈ ಗೌರವ ಲಭಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಐಪಾಸ್ ಫೌಂಡೇಶನ್ ಜಂಟಿಯಾಗಿ ನಡೆಸಿದ ಸಮೀಕ್ಷೆಯಲ್ಲಿ ಲೇಡಿಗೋಷನ್ ಆಸ್ಪತ್ರೆಯು ರಾಜ್ಯದ ಜಿಲ್ಲಾಸ್ಪತ್ರೆಗಳ ಪೈಕಿ ಮೊದಲನೇ ಸ್ಥಾನ ಪಡೆದುಕೊಂಡಿದೆ.



