Close Menu
    Latest Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ
    ಸುದ್ದಿ

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    navabharathaBy navabharathaNovember 3, 2026

    ಬಜಪೆ, ನ. 21: ಎಲ್-ನಿನೋ ಪ್ರಭಾವದಿಂದ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಆತಂಕದ ಹಿನ್ನೆಲೆಯಲ್ಲಿ ಅಂತರ್ಜಲ ಸಂರಕ್ಷಣೆ ಹಾಗೂ ಮಳೆನೀರು ಮರುಬಳಕೆಯ ಕುರಿತು ಜನಜಾಗೃತಿ ಮೂಡಿಸಲು ಬಡಗ ಎಕ್ಕಾರು ಪ್ರೌಢಶಾಲೆಯ ವಿದ್ಯಾರ್ಥಿಗಳು ವಿನೂತನ ಅಭಿಯಾನ ಕೈಗೊಂಡಿದ್ದಾರೆ.
    ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಹಭಾಗಿತ್ವದಲ್ಲಿ ಮನೆಗೊಂದು ಇಂಗುಗುಂಡಿ ನಿರ್ಮಿಸುವ ಪರಿಕಲ್ಪನೆಯೊಂದಿಗೆ ಜಲ ಸಂರಕ್ಷಣೆಯ ಸಂದೇಶವನ್ನು ಸಾರಲಾಗುತ್ತಿದೆ. ಮಳೆನೀರು ವ್ಯರ್ಥವಾಗಿ ಹರಿದುಹೋಗದೆ ಭೂಮಿಯಲ್ಲಿ ಇಂಗುವಂತೆ ಮಾಡುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
    ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಇಂಗುಗುಂಡಿ ನಿರ್ಮಿಸುವಂತೆ ಪೋಷಕರಿಗೆ ಮನವರಿಕೆ ಮಾಡುತ್ತಿದ್ದಾರೆ. ಅಲ್ಲದೆ, ನೆರೆಹೊರೆಯವರಿಗೂ ಮಳೆನೀರು ಸಂಗ್ರಹಣೆ ಮತ್ತು ಅಂತರ್ಜಲ ಸಂರಕ್ಷಣೆಯ ಅಗತ್ಯದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಮಳೆನೀರು ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಣ್ಣ ಪ್ರಯತ್ನಗಳೂ ಭವಿಷ್ಯದ ನೀರಿನ ಬವಣೆಯನ್ನು ತಡೆಯಲು ಸಹಕಾರಿಯಾಗಲಿವೆ ಎಂಬ ಸಂದೇಶವನ್ನು ಅಭಿಯಾನದ ಮೂಲಕ ಸಾರುತ್ತಿದ್ದಾರೆ.
    ಗ್ರಾಮದ ಸಂಘ-ಸಂಸ್ಥೆಗಳ ಸಹಕಾರ
    ಅಭಿಯಾನದ ಮಹತ್ವವನ್ನು ಅರಿತ ಗ್ರಾಮದ ವಿವಿಧ ಸಂಘ-ಸಂಸ್ಥೆಗಳು, ಸಂಘಟನೆಗಳು ಹಾಗೂ ಸಾರ್ವಜನಿಕರು ಕೈಜೋಡಿಸಿದ್ದಾರೆ. ಯುವಕರು, ಗ್ರಾಮಸ್ಥರು ಮತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಇಂಗುಗುಂಡಿ ನಿರ್ಮಾಣ ಕಾರ್ಯಕ್ಕೆ ಪ್ರೋತ್ಸಾಹ ದೊರೆಯುತ್ತಿದೆ.
    ಇಂಗುಗುಂಡಿ ನಿರ್ಮಾಣಕ್ಕೆ ಪ್ರಾಮುಖ್ಯತೆ
    ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಇಂಗುಗುಂಡಿ ನಿರ್ಮಿಸಿದ ಅನುಭವದ ಆಧಾರದಲ್ಲಿ ಇತರರಿಗೂ ಅರಿವು ಮೂಡಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಸೂಕ್ತ ಸ್ಥಳದಲ್ಲಿ ಇಂಗುಗುಂಡಿ ನಿರ್ಮಿಸಿ ಮಳೆನೀರನ್ನು ಭೂಮಿಗೆ ಇಂಗಿಸುವ ಮೂಲಕ ಅಂತರ್ಜಲ ಸಂರಕ್ಷಿಸಬಹುದು ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿಕೊಡುತ್ತಿದ್ದಾರೆ.
    ಶಾಲಾ ಹಂತದಲ್ಲಿಯೇ ಪರಿಸರ ಸಂರಕ್ಷಣೆ ಮತ್ತು ಜಲಸಂರಕ್ಷಣೆಯ ಜವಾಬ್ದಾರಿಯನ್ನು ಮಕ್ಕಳಲ್ಲಿ ಬೆಳೆಸುವ ಈ ಪ್ರಯತ್ನ ಸಾರ್ವಜನಿಕರ ಗಮನ ಸೆಳೆದಿದೆ.

    Previous Articleಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    Related Posts

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026

    ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಆಯುಕ್ತರ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

    November 3, 2026

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ

    November 3, 2026

    ಕನ್ನಡ ಗ್ರಾಮದಲ್ಲಿ ನ.4ರಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ 36ನೇ ಸಂಸ್ಥಾಪನಾ ವರ್ಷಾಚರಣೆ

    November 3, 2026
    Latest Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026
    ತಾಜಾ ಸುದ್ದಿಗಳು

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026

    ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಆಯುಕ್ತರ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

    November 3, 2026

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ

    November 3, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.