ಸುರತ್ಕಲ್: ರಂಗಚಾವಡಿ ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಹಾಗೂ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ.) ಸುರತ್ಕಲ್ ಇದರ ಆಶ್ರಯದಲ್ಲಿ ನವೆಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ‘ರಂಗು ರಂಗಿನ ರಂಗೋತ್ಸವ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮದಲ್ಲಿ 2026ನೇ ಸಾಲಿನ ರಂಗಚಾವಡಿ ಪ್ರಶಸ್ತಿಯನ್ನು ಹಿರಿಯ ಕಲಾವಿದ ಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ಪ್ರದಾನ ಮಾಡಲಾಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮುಂಬೈನ ವಿಕೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್, ಚಲನಚಿತ್ರ ನಿರ್ಮಾಪಕ ಡಾ. ಸಂಜೀವ ದಂಡೆಕೇರಿ, ಕಟೀಲು ಶ್ರೀ ಡೆವಲಪರ್ಸ್ ಆಡಳಿತ ನಿರ್ದೇಶಕ ಗಿರೀಶ್ ಎಂ. ಶೆಟ್ಟಿ ಕಟೀಲು, ದಿವ್ಯರೂಪ ಕನ್ಸ್ಟ್ರಕ್ಷನ್ ಪ್ರೈ. ಲಿ. ಮಾಲಕ ಯಾದವ ಕೋಟ್ಯಾನ್ ಪೆರ್ಮುದೆ, ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷ ಸಿಎ ಸುನೀಲ್ ಭಂಡಾರಿ, ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಯಥಾರ್ಥ್ ಸೋಶಿಯಲ್ ಸ್ಥಾಪಕಾಧ್ಯಕ್ಷ ಈಶ್ವರ್ ಪ್ರಸಾದ್ ಶೆಟ್ಟಿ ಹಾಗೂ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಶೆಟ್ಟಿ ಉಪಸ್ಥಿತರಿದ್ದರು.
ಬಳಿಕ ಸ್ಟಾರ್ ವಾಯ್ಸ್ ಮೆಲೊಡೀಸ್ ತಂಡದಿಂದ ಸಂಗೀತ ಗಾನಸುಧೆ ನಡೆಯಿತು. ಕಲಾ ಸಂಗಮದ ಕಲಾವಿದರು ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ನೂತನ ಕೃತಿ ‘ಶ್ರೀಮತಿ ಸತ್ಯಭಾಮ’ ನಾಟಕವನ್ನು ಉಚಿತವಾಗಿ ಪ್ರದರ್ಶಿಸಿದರು.



